ಭಾಷೆಯನ್ನು ಆಯ್ಕೆಮಾಡಿ :

ಕನ್ನಡ (Kannada)

west-bengalASSEMBLY ELECTIONS 2021

292/292 SEATS (147 SEATS TO WIN)

Alliance TMCBJPLEFT+OTH
Wins
+
Leads
2147611
+/- 2015

292/292 SEATS

(147 SEATS TO WIN)

tamil-naduASSEMBLY ELECTIONS 2021

234/234 SEATS (118 SEATS TO WIN)

Alliance DMK+AIADMK+MNM+AMMK+OTH
Wins
+
Leads
15975000
+/- 2015

234/234 SEATS

(118 SEATS TO WIN)

keralaASSEMBLY ELECTIONS 2021

140/140 SEATS (71 SEATS TO WIN)

Alliance LDFUDFBJP+OTH
Wins
+
Leads
994100
+/- 2015

140/140 SEATS

(71 SEATS TO WIN)

assamASSEMBLY ELECTIONS 2021

126/126 SEATS (64 SEATS TO WIN)

Alliance BJP+INC+OTH
Wins
+
Leads
75501
+/- 2015

126/126 SEATS

(64 SEATS TO WIN)

puducherryASSEMBLY ELECTIONS 2021

30/30 SEATS (16 SEATS TO WIN)

Alliance BJP+INC+OTH
Wins
+
Leads
1695
+/- 2015

30/30 SEATS

(16 SEATS TO WIN)

All Party Meeting: ಸಿಎಂಗೆ ಕೋವಿಡ್​ ಹಿನ್ನಲೆ ಸರ್ವಪಕ್ಷ ಸಭೆ ಮುಂದೂಡಿಕೆ

ಮುಖ್ಯಮಂತ್ರಿಗಳ ಆರೋಗ್ಯ ಇನ್ನೆರಡು ದಿನದಲ್ಲಿ ಸ್ವಲ್ಪ ಚೇತರಿಕೆ ಕಾಣಲಿದ್ದು, ನಂತರ ಮತ್ತೆ ಸಭೆ ನಿಗದಿಸುವ ಸಾಧ್ಯತೆ ಇದೆ ಎನ್ನಲಾಗಿದೆ

ಬೆಂಗಳೂರು (ಏ. 16): ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್​​  ಸೋಂಕು ನಿಯಂತ್ರಣ ಕುರಿತ ಚರ್ಚೆಗಾಗಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಏ. 18ರಂದು ಕರೆದಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ. ಇದೇ ಭಾನುವಾರ ಸಂಜೆ 4 ಗಂಟೆಗೆ ಸಭೆ ನಿಗದಿಸಿ  ಮುಖ್ಯಮಂತ್ರಿಗಳು ಪ್ರತಿಪಕ್ಷಗಳ ನಾಯಕರಿಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಮತ್ತೊಮ್ಮೆ ಕೋವಿಡ್​ ಸೋಂಕಿಗೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನಲೆಯಲ್ಲಿ ಸಭೆಯನ್ನು ಮುಂದೂಡಲಾಗಿದೆ. ಇದಕ್ಕೆ ಮೊದಲು ಸಭೆಯನ್ನು ಮುಂದೂಡುವ ಬದಲು ಸಿಎಂ ಅನುಪಸ್ಥಿತಿಯಲ್ಲಿ ಹಿರಿಯ ಸಚಿವರೊಬ್ಬರ ಉಸ್ತುವಾರಿಯಲ್ಲಿ ಸಭೆ ನಡೆಸುವ ಬಗ್ಗೆ ಚರ್ಚೆ ನಡೆದಿತ್ತು. ಈ ಬಗ್ಗೆ ಸಿಎಂ ಬಿಎಸ್​ ಯಡಿಯೂರಪ್ಪ ಕೂಡ ಅನುಮತಿ ನೀಡಿದ್ದು, ಸಭೆ ಉಸ್ತುವಾರಿ ವಹಿಸುವ ಸಚಿವರ ಹೆಸರು ಕುರಿತು ನಾಳೆ ಪ್ರಕಟಣೆ ಹೊರಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ, ಇದೀಗ ಈ ಸಭೆಯನ್ನು ಮುಂದೂಡಲಾಗಿದೆ.


ಮುಖ್ಯಮಂತ್ರಿಗಳ ಆರೋಗ್ಯ ಇನ್ನೆರಡು ದಿನದಲ್ಲಿ ಸ್ವಲ್ಪ ಚೇತರಿಕೆ ಕಾಣಲಿದ್ದು, ನಂತರ ಮತ್ತೆ ಸಭೆ ನಿಗದಿಸುವ ಸಾಧ್ಯತೆ ಇದೆ ಎನ್ನಲಾಗಿದೆ.




ಸೋಂಕಿನ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಆರೋಗ್ಯದ ಕುರಿತು ಮಣಿಪಾಲ್​ ಆಸ್ಪತ್ರೆ ವೈದ್ಯರು ಸಂಜೆ ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಿತ್ತು. ಮುಖ್ಯಮಂತ್ರಿಗಳಿಗೆ ನುರಿತ ವೈದ್ಯರ ತಂಡ ರಚಿಸಿ ನಿಗಾವಹಿಸಲಾಗಿದೆ. ಉಸಿರಾಟ ಸಂಬಂಧಿತ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಸಿಎಂ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪ್ರಕಟಣೆ ತಿಳಿಸಿತು.

ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲ್ಲೇ ಇದ್ದು , ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಲಾಕ್​ಡೌನ್​ನಂತಹ ಕ್ರಮ ಒಂದೇ ಪರಿಹಾರವಲ್ಲ. ಇದರ ಹೊರತಾಗಿ ನಿಯಂತ್ರಣಕ್ಕೆ ಯಾವ ಕ್ರಮ ಕೈಗೊಳ್ಳಬಹುದು ಎಂಬ ಕುರಿತು ಅಭಿಪ್ರಾಯ ತಿಳಿಸುವಂತೆ ಸಿಎಂ ಉಭಯ ಸದನ ನಾಯಕರ ಸಭೆ ಕರೆದಿದ್ದರು.

Published by: Seema R
First published: April 16, 2021, 10:23 PM IST