ಕೋವಿಡ್ ನಿಯಮ ಪಾಲನೆ ಪರಿಶೀಲನೆಗೆ ರಸ್ತೆಗಿಳಿದ ಕೊಡಗು ಜಿಲ್ಲಾಧಿಕಾರಿ ಚಾರುಲತಾ; 70 ಜನರಿಗೆ ದಂಡ!
ಮಡಿಕೇರಿಯ ನಗರಸಭೆಯಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಬಹುತೇಕ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಕೊನೆಯ ದಿನವೆಂದು ನಾಮಪತ್ರ ಸಲ್ಲಿಕೆಗೆ ಒಟ್ಟೊಟ್ಟಿಗೆ ಬಂದಿದ್ದರಿಂದ ನಗರಸಭೆಯ ಆವರಣದಲ್ಲಿ ನೂಕುನುಗ್ಗಲು ಉಂಟಾಗಿತ್ತು.
news18-kannada Updated:April 15, 2021, 9:20 PM IST
ಕೋವಿಡ್ ನಿಯಮ ಪರಿಶೀಲನೆ ನಡೆಸಿದ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್.
ಕೊಡಗು: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಸ್ಫೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಗುರುವಾರ ಕುದ್ದು ಫೀಲ್ಡಿಗಿಳಿದಿದ್ದರು. ಮಡಿಕೇರಿ ನಗರದ ವಿವಿಧ ಬೀದಿಗಳಲ್ಲಿ ಅನಿರೀಕ್ಷಿತವಾಗಿ ಓಡಾಡಿದ ಜಿಲ್ಲಾಧಿಕಾರಿ ಮಾಸ್ಕ್ ಹಾಕದೆ ಓಡಾಡುತ್ತಿದ್ದ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರನ್ನು ತರಾಟೆಗೆ ತೆಗೆದುಕೊಂಡರು. ಜೊತೆಗೆ ಸ್ವತಃ ಅವರೇ ಸ್ಥಳದಲ್ಲಿಯೇ 70 ಜನರಿಗೆ ದಂಡ ವಿಧಿಸಿ ಕೋವಿಡ್ ನಿಯಮ ಪಾಲಿಸದಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.
ಮಡಿಕೇರಿ ನಗರದ ಅಂಚೆ ಕಚೇರಿ ಬಳಿಯಿಂದ ರಸ್ತೆಯಲ್ಲಿ ನಡೆದುಕೊಂಡೇ ಓಡಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸುತ್ತಾಡಿ ಮಾಸ್ಕ್ ಹಾಕದವರಿಗೆ ದಂಡ ವಿಧಿಸಿದ್ದಾರೆ. ಕೇವಲ ಒಂದು ಗಂಟೆಯಲ್ಲಿ ಮಾಸ್ಕ್ ಹಾಕದ 70 ಜನರಿಗೆ ದಂಡ ವಿಧಿಸಿ 7 ಸಾವಿರ ದಂಡ ಸಂಗ್ರಹಿಸಿದ್ದಾರೆ. ಈ ವೇಳೆ ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್ ಅವರು ಜಿಲ್ಲಾಧಿಕಾರಿ ಅವರೊಂದಿಗೆ ಸಾಥ್ ನೀಡಿದ್ದಾರೆ. ಬಳಿಕ ರಾಮದಾಸ್ ಜೊತೆಗೆ ಚರ್ಚಿಸಿರುವ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಂಗಡಿ ಮುಂಗಟ್ಟು, ಹೊಟೇಲ್, ರೆಸ್ಟೋರೆಂಟ್ ಗಳಿಗೆ ಬರುವ ಗ್ರಾಹಕರು ಮಾಸ್ಕ್ ಧರಿಸಿರಲೇಬೇಕು. ಒಂದು ವೇಳೆ ಮಾಸ್ಕ್ ಧರಿಸದೇ ಇದ್ದಲ್ಲಿ ಅಂಗಡಿ ಮುಂಗಟ್ಟು, ಹೊಟೇಲ್ ಮತ್ತು ರಸ್ಟೋರೆಂಟ್ ಗಳ ಮಾಲೀಕರಿಗೆ ದಂಡ ವಿಧಿಸಿ ಅಂತ ಸೂಚಿಸಿದ್ದಾರೆ. ಅಲ್ಲದೇ ಅವರ ವ್ಯಾಪಾರ ಉದ್ದಿಮೆ ಪರವಾನಗಿಯನ್ನು ಕೋವಿಡ್ ಮುಗಿಯುವವರೆಗೂ ರದ್ದು ಮಾಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದನ್ನು ಓದಿ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ...! ಗದಗಿನಲ್ಲಿ ಅಬ್ಬರಿಸಿದ ವರುಣ, ಜನರ ಪರದಾಟ
ಗ್ರಾಹಕರು ಮಾಸ್ಕ್ ಧರಿಸುವುದು ಕಡ್ಡಾಯವೆಂದು ಅಂಗಡಿಗಳ ಮುಂದೆ ಬೋರ್ಡ್ ಹಾಕಿ, ಸ್ಯಾನಿಟೈಸರ್ ಇಡುವಂತೆ ನೋಡಿಕೊಳ್ಳಿ ಎಂದು ಸೂಚಿಸಿದ್ದಾರೆ. ಈ ಕುರಿತು ಈಗಾಗಲೇ ಅಂಗಡಿ ಮುಂಗಟ್ಟು, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಮಾಲೀಕರಿಗೆ ಸೂಚನಾ ಪತ್ರ ಕಳುಹಿಸಿರುವುದಾಗಿ ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್ ತಿಳಿಸಿದ್ದಾರೆ. ಇತ್ತ ಗುರುವಾರ ಮಡಿಕೇರಿ ನಗರಸಭೆಗೆ ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಬಂದಿದ್ದ ಬಹುತೇಕ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾಸ್ಕ್ ಧರಿಸದೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಮಡಿಕೇರಿಯ ನಗರಸಭೆಯಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಬಹುತೇಕ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಕೊನೆಯ ದಿನವೆಂದು ನಾಮಪತ್ರ ಸಲ್ಲಿಕೆಗೆ ಒಟ್ಟೊಟ್ಟಿಗೆ ಬಂದಿದ್ದರಿಂದ ನಗರಸಭೆಯ ಆವರಣದಲ್ಲಿ ನೂಕುನುಗ್ಗಲು ಉಂಟಾಗಿತ್ತು.
ಈ ವೇಳೆ ಯಾರೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪುಗುಂಪಾಗಿ ನಿಂತಿದ್ದರು. ಇನ್ನು ಸಾಕಷ್ಟು ಅಭ್ಯರ್ಥಿಗಳೇ ಮಾಸ್ಕ್ ಧರಿಸದೇ ಇದ್ದರೆ, ಮತ್ತೆಷ್ಟೋ ಅಭ್ಯರ್ಥಿಗಳು ನಾಮಕಾವಸ್ಥೆಗೆ ಮಾಸ್ಕ್ ಧರಿಸಿದ್ದರು. ಅವರ ಬೆಂಬಲಿಗರೂ ಕೂಡ ಇದರಿಂದ ಹೊರತ್ತಾಗಿರಲಿಲ್ಲ. ಸ್ಥಳದಲ್ಲಿದ್ದ ಪೊಲೀಸರು ನಗರಸಭೆ ಆವರಣದಲ್ಲಿರುವ ಅಭ್ಯರ್ಥಿಗಳು ಮತ್ತು ಬೆಂಬಲಿಗರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮೈಕ್ ಮೂಲಕ ಎಚ್ಚರಿಸುವ ಕೆಲಸ ಮಾಡಿದರು.
ಮಡಿಕೇರಿ ನಗರದ ಅಂಚೆ ಕಚೇರಿ ಬಳಿಯಿಂದ ರಸ್ತೆಯಲ್ಲಿ ನಡೆದುಕೊಂಡೇ ಓಡಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಕಾಲೇಜು ರಸ್ತೆ, ಮಾರುಕಟ್ಟೆ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸುತ್ತಾಡಿ ಮಾಸ್ಕ್ ಹಾಕದವರಿಗೆ ದಂಡ ವಿಧಿಸಿದ್ದಾರೆ. ಕೇವಲ ಒಂದು ಗಂಟೆಯಲ್ಲಿ ಮಾಸ್ಕ್ ಹಾಕದ 70 ಜನರಿಗೆ ದಂಡ ವಿಧಿಸಿ 7 ಸಾವಿರ ದಂಡ ಸಂಗ್ರಹಿಸಿದ್ದಾರೆ. ಈ ವೇಳೆ ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್ ಅವರು ಜಿಲ್ಲಾಧಿಕಾರಿ ಅವರೊಂದಿಗೆ ಸಾಥ್ ನೀಡಿದ್ದಾರೆ. ಬಳಿಕ ರಾಮದಾಸ್ ಜೊತೆಗೆ ಚರ್ಚಿಸಿರುವ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಂಗಡಿ ಮುಂಗಟ್ಟು, ಹೊಟೇಲ್, ರೆಸ್ಟೋರೆಂಟ್ ಗಳಿಗೆ ಬರುವ ಗ್ರಾಹಕರು ಮಾಸ್ಕ್ ಧರಿಸಿರಲೇಬೇಕು. ಒಂದು ವೇಳೆ ಮಾಸ್ಕ್ ಧರಿಸದೇ ಇದ್ದಲ್ಲಿ ಅಂಗಡಿ ಮುಂಗಟ್ಟು, ಹೊಟೇಲ್ ಮತ್ತು ರಸ್ಟೋರೆಂಟ್ ಗಳ ಮಾಲೀಕರಿಗೆ ದಂಡ ವಿಧಿಸಿ ಅಂತ ಸೂಚಿಸಿದ್ದಾರೆ. ಅಲ್ಲದೇ ಅವರ ವ್ಯಾಪಾರ ಉದ್ದಿಮೆ ಪರವಾನಗಿಯನ್ನು ಕೋವಿಡ್ ಮುಗಿಯುವವರೆಗೂ ರದ್ದು ಮಾಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಗ್ರಾಹಕರು ಮಾಸ್ಕ್ ಧರಿಸುವುದು ಕಡ್ಡಾಯವೆಂದು ಅಂಗಡಿಗಳ ಮುಂದೆ ಬೋರ್ಡ್ ಹಾಕಿ, ಸ್ಯಾನಿಟೈಸರ್ ಇಡುವಂತೆ ನೋಡಿಕೊಳ್ಳಿ ಎಂದು ಸೂಚಿಸಿದ್ದಾರೆ. ಈ ಕುರಿತು ಈಗಾಗಲೇ ಅಂಗಡಿ ಮುಂಗಟ್ಟು, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಮಾಲೀಕರಿಗೆ ಸೂಚನಾ ಪತ್ರ ಕಳುಹಿಸಿರುವುದಾಗಿ ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್ ತಿಳಿಸಿದ್ದಾರೆ. ಇತ್ತ ಗುರುವಾರ ಮಡಿಕೇರಿ ನಗರಸಭೆಗೆ ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಬಂದಿದ್ದ ಬಹುತೇಕ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾಸ್ಕ್ ಧರಿಸದೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಮಡಿಕೇರಿಯ ನಗರಸಭೆಯಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಬಹುತೇಕ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಕೊನೆಯ ದಿನವೆಂದು ನಾಮಪತ್ರ ಸಲ್ಲಿಕೆಗೆ ಒಟ್ಟೊಟ್ಟಿಗೆ ಬಂದಿದ್ದರಿಂದ ನಗರಸಭೆಯ ಆವರಣದಲ್ಲಿ ನೂಕುನುಗ್ಗಲು ಉಂಟಾಗಿತ್ತು.

ಈ ವೇಳೆ ಯಾರೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪುಗುಂಪಾಗಿ ನಿಂತಿದ್ದರು. ಇನ್ನು ಸಾಕಷ್ಟು ಅಭ್ಯರ್ಥಿಗಳೇ ಮಾಸ್ಕ್ ಧರಿಸದೇ ಇದ್ದರೆ, ಮತ್ತೆಷ್ಟೋ ಅಭ್ಯರ್ಥಿಗಳು ನಾಮಕಾವಸ್ಥೆಗೆ ಮಾಸ್ಕ್ ಧರಿಸಿದ್ದರು. ಅವರ ಬೆಂಬಲಿಗರೂ ಕೂಡ ಇದರಿಂದ ಹೊರತ್ತಾಗಿರಲಿಲ್ಲ. ಸ್ಥಳದಲ್ಲಿದ್ದ ಪೊಲೀಸರು ನಗರಸಭೆ ಆವರಣದಲ್ಲಿರುವ ಅಭ್ಯರ್ಥಿಗಳು ಮತ್ತು ಬೆಂಬಲಿಗರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮೈಕ್ ಮೂಲಕ ಎಚ್ಚರಿಸುವ ಕೆಲಸ ಮಾಡಿದರು.
Published by:
HR Ramesh
First published:
April 15, 2021, 9:20 PM IST